ಬಾಲಿವುಡ್ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುಲ್ ಚಕ್ರವರ್ತಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದು ಅವನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಫೆ 10) ಮುಂಜಾನೆ ಮಿಥುನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಿಥುನ್ ಚಕ್ರವರ್ತಿ ಆರೋಗ್ಯದ ಕುರಿತು ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದ್ದುಅಭಿಮಾನಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಿಥುನ್ ಚಕ್ರವರ್ತಿ ಮಗ ಮಹಾಕ್ಷಯ ತಂದೆ ಆರಾಮವಾಗಿದ್ದು ರೊಟೀನ್ ಚಕ್ ಅಪ್ ಆಗಿ ಆಸ್ಪತ್ರೆಗೆ ಬಂದಿರುವುದಾಗಿ ತಿಳಿಸಿದ್ದಾರೆ.
1976ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಿಥುನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಮೊದಲ ಚಿತ್ರದಲ್ಲೇ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ್ದು ನಾಯಕನಾಗಿ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.