ಶಿವಮೊಗ್ಗ: ಮಲ್ಲಿಕಾರ್ಜುನ ಖರ್ಗೆಯಂತವರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆ ಅಂತಹ ಕೆಟ್ಟ ಹುಳ ಹುಟ್ಟಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಯನ್ನು (Priyank Kharge) ಕಾಂಗ್ರೆಸ್ ನವರು ಅಂತಾ ಕರೆಯಲು ಇಷ್ಟಪಡಲ್ಲ. ಇವರು ಯಾರೂ ಕಾಂಗ್ರೆಸ್ ನವರಲ್ಲ. ಕಾಂಗ್ರೆಸ್ ಹೆಸರಿನಲ್ಲಿ ಅಧಿಕಾರ ಹಂಚಿಕೊಂಡಿರುವವರು ಎಂದರು.
Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!
ಜೈಲಿಗೆ ಹೋಗಲ್ಲ: ಮುಖ್ಯಮಂತ್ರಿ, ಸುರ್ಜೇವಾಲಾ ಅವರಿಗೆ 10 ಸಾವಿರ ದಂಡ ಕಟ್ಟಿ ಅಂತಾ ಕೋರ್ಟ್ ಹೇಳಿದೆ. ನಾನು ದಂಡ ಕಟ್ಟುವ ಪ್ರಸಂಗ ಬಂದಿಲ್ಲ. ಡಿಸಿಎಂ ಡಿಕೆಶಿ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಸುರೇಶ್ ಕೊಟ್ಟಿರುವ ಹೇಳಿಕೆ ಸರಿ ಇದೆಯಾ ಅಂತಾ ಸ್ಪಷ್ಟಪಡಿಸಲಿ. ನಾನು ಬೇಕಾದಷ್ಟು ಹೇಳಿಕೆ ಕೊಟ್ಟಿದ್ದೇನೆ. ಒಂದೇ ಒಂದು ರೂಪಾಯಿ ಪೆನಾಲ್ಟಿ ಕಟ್ಟಿಲ್ಲ. ಒಂದೇ ಒಂದು ದಿನ ಜೈಲಿಗೆ ಹೋಗಿಲ್ಲ ಎಂದು ತಿಳಿಸಿದರು.