ಜಸ್ಪ್ರೀತ್ ಬುಮ್ರಾಗೆ ರೆಸ್ಟ್ ನೀಡುವಂತೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಗೆ BCCI ಖಡಕ್ ಸೂಚನೆ ನೀಡಿದೆ
ಇಂಗ್ಲೆಂಡ್ ವಿರುದ್ಧದ ಕೊನೆಯ 3 ಪಂದ್ಯಗಳಿಗೆ ಭಾರತ ತಂಡವನ್ನು (India Squad) ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 3ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ವಿಶ್ರಾಂತಿ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು
ಆದರೀಗ ರಾಜ್ಕೋಟ್ನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ. ಆದರೆ 4ನೇ ಪಂದ್ಯದ ವೇಳೆ ಅವರಿಗೆ ವಿಶ್ರಾಂತಿ ನೀಡುವಂತೆ ಬಿಸಿಸಿಐ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಸೂಚಿಸಿದೆ.
ಏಕೆಂದರೆ ಮೊಹಮ್ಮದ್ ಶಮಿಯ ಅಲಭ್ಯತೆಯ ನಡುವೆ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಬೌಲಿಂಗ್ ಲೈನಪ್ ಅನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಹೆಚ್ಚಿನ ಓವರ್ಗಳನ್ನು ಎಸೆದಿದ್ದರು.
ಇದೀಗ ಅವರ ಮೇಲಿನ ಒತ್ತಡವನ್ನು ಕಡಿಮೆಗೊಳಿಸಲು ಬಿಸಿಸಿಐ 4ನೇ ಟೆಸ್ಟ್ ಪಂದ್ಯದ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲಿದೆ. ಒಂದು ವೇಳೆ ಟೀಮ್ ಇಂಡಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಬುಮ್ರಾ ವಿಶ್ರಾಂತಿ ತೆಗೆದುಕೊಳ್ಳುವುದು ಖಚಿತ ಎಂದೇ ಹೇಳಬಹುದು
ಆದರೆ ಒಂದು ವೇಳೆ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲುಂಡರೆ ನಾಲ್ಕನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಬಹುದು. ಬುಮ್ರಾ ಅವರನ್ನು ಹೊರತುಪಡಿಸಿ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಭಾರತದ ಯಾವುದೇ ವೇಗದ ಬೌಲರ್ ಯಶಸ್ವಿಯಾಗಿಲ್ಲ. ಹೀಗಾಗಿ 3ನೇ ಪಂದ್ಯದ ಫಲಿತಾಂಶದ ಮೇಲೆ ಬುಮ್ರಾ ಅವರ ವಿಶ್ರಾಂತಿ ನಿರ್ಧಾರವಾಗಲಿದೆ