ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಇಂದು ಅಯೋಧ್ಯೆಯ ರಾಮಮಂದಿರಕ್ಕೆ (Ram Mandir) ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆಮ್ ಆದ್ಮಿ ಪಕ್ಷದ (AAP) ನಾಯಕ ಅವರ ಪತ್ನಿ ಮತ್ತು ಕುಟುಂಬಸ್ಥರೊಂದಿಗೆ ಭೇಟಿ ನೀಡಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಕೂಡ ಪವಿತ್ರ ತಾಣಕ್ಕೆ ಭೇಟಿ ನೀಡಲಿದ್ದಾರೆ.
ಸುಲಿದ ಬೆಳ್ಳುಳ್ಳಿಯನ್ನು ಫ್ರಿಡ್ಜ್ ನಲ್ಲಿ ಇಡುತ್ತಿದ್ದೀರಾ: ಈಗಲೇ ನಿಲ್ಲಿಸಿ ಅಪಾಯ ಕಟ್ಟಿಟ್ಟಬುತ್ತಿ!
ಜ.22 ರಂದು ನಡೆದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ತನಗೆ ಔಪಚಾರಿಕ ಆಹ್ವಾನ ಬಂದಿಲ್ಲ ಎಂದು ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು. ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದಾರೆ ಎನ್ನಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜ.22 ರಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರೋಕ್ತವಾಗಿ ನೆರವೇರಿತು. ಇದಾದ ಬಳಿಕ ಪಕ್ಷಾತೀತವಾಗಿ ನಾಯಕರು ಕೂಡ ಪವಿತ್ರ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.