ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಿದ್ದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮಾತನಾಡಿದರು.
ಅಧಿವೇಶನದಲ್ಲಿ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.
ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.