ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾನುವಾರ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಭೇಟಿ ಮಹತ್ವ ಪಡೆದುಕೊಂಡಿದೆ
ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಯೋಗೇಶ್ವರ್ ಸೋತಿದ್ದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ವ್ಯಾಪ್ತಿಗೆ ಬರುತ್ತದೆ. 8 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಇದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಶಾಸಕ ಹೆಚ್ಡಿ ಕುಮಾರಸ್ವಾಮಿ ಇದ್ದಾರೆ.