ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದ್ದು, ಪದವೀಧರ ಯುವ ಜನತೆಗೆ ಕೇಂದ್ರ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮಗಳಲ್ಲಿಯೂ ಒಂದಾದರು ಗ್ರಾಮ ಒನ್ ಕೇಂದ್ರ ಇದ್ದೆ ಇರುತ್ತದೆ. ಈ ಗ್ರಾಮ ಒನ್ ಕೇಂದ್ರವು ಯೋಜನೆಗಳ ಅರ್ಜಿ ಸಲ್ಲಿಕೆಯ ಜೊತೆಗೆ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸಿಕೊಡುತ್ತದೆ.
ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ನೀವು ಸ್ವಂತ ಉದ್ಯೋಗದ ಕನಸು ಕಾಣುತ್ತಿದ್ದರೆ ಈ ಗ್ರಾಮ ಒನ್ ಕೇಂದ್ರವನ್ನು ತೆರೆಯುವ ಮೂಲಕ ನಿಮ್ಮ ಸ್ವಂತ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ಮುಖ್ಯ ದಾಖಲೆಗಳನ್ನು ನೀಡುವ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರ್ಯಾಂಚೈಸ್ ಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಿ
ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ನಿಟ್ಟೂರು, ಬಲ್ಯಮಂಡೂರು, ಕೆ.ಬಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ಪೊನ್ನಂಪೇಟೆಯ ನಾಲ್ಕೇರಿ, ಬೆಟ್ಟದಳ್ಳಿ ಮತ್ತು ಸೋಮವಾರಪೇಟೆಯ ಗರ್ವಾಲೆ, ಕಾಕೋಟು ಪರಂಬು, ಬೇಟೋಳಿ ಮತ್ತು ವಿರಾಜಪೇಟೆಯ ಅಮ್ಮತ್ತಿ ತಾಲೂಕಿನ 14 ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರ್ಯಾಂಚೈಸ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಫ್ರಾಂಚೈಸಿಗಳು https://kal-mys.gramaone.karnataka.gov.in/ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15 ರವರೆಗೆ ಅರ್ಜಿ ಸಲ್ಲಿಕೆಗೆ ಅನುಮತಿಸಲಾಗಿದೆ. ನಿಮ್ಮ ಊರಿನಲ್ಲಿ ನೀವು ಗ್ರಾಮ ಒನ್ ಕೇಂದ್ರವನ್ನು ತೆರೆಯುವ ಮೂಲಕ ಜನಸಾಮನ್ಯರಿಗೆ ಸೇವೆಯನ್ನು ನೀಡಬಹುದು. ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಇನ್ನಿತರ ಮುಖ್ಯ ಮಾಹಿತಿಯ ಜೊತೆಗೆ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು.