ಬೆಂಗಳೂರು: ಅತ್ತ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ..
ಇದೇ 16ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಇದಕ್ಕೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.. ಇಂದು ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಿದ್ದು ,ರಾಜ್ಯದ ಮೂಲೆ ಮೂಲೆಯಿಂದ ಪ್ರತಿಭಟನಾಕಾರರು ಆಗಮಿಸಲಿದ್ದಾರೆ. ಅಹೋರಾತ್ರಿ ಧರಣಿ ಮಾಡುವ ಮೂಲಕ ತನ್ನ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು..