ಚಾಮರಾಜನಗರ:– ರಾಜ್ಯ ಸರ್ಕಾರದ ಬಜೆಟ್ ವೇಳೆ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ.
ನಗರದ ಚಾಮರಾಜೇಶ್ವರ ದೇವಾಲಯದಿಂದ ಹೊರಟ ಪ್ರತಿಭಟನಾಕಾರರು ಭುವನೇಶ್ವರಿವೃತ್ತ ಹಾಗೂ ಬಿ.ರಾಚಯ್ಯ ಜೋಡಿ ಮೂಲಕ ಸಾಗಿ ಪ್ರತಿಭಟನೆ ಮಾಡಿದ್ದಾರೆ.
ಇದೇ ವೇಳೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದು, ಮುತ್ತಿಗೆ ಹಾಕುವುದನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತ ಹೋರಟಗಾರರು ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.