ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರವು ಹಳೆ ಪಿಂಚಣಿ ಜಾರಿ ಮಾಡಿ ಗೆಜೆಟ್ ಪ್ರಕಟಿಸಿದೆ. 2006ರ ಎಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ
ಸರ್ಕಾರಿ ಆದೇಶದ ಪ್ರಕಾರ 2006ರ ಏಪ್ರಿಲ್ 1ರಂದು ಹಾಗೂ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ
ಕೇಂದ್ರ ಸರ್ಕಾರವು ತನ್ನ ನೌಕರರಿಗೆ 2023ರ ಡಿಸೆಂಬರ್ 22ರ ಮೊದಲು ನೇಮಕಾತಿ / ನೇಮಕಾತಿಗಾಗಿ ಜಾಹೀರಾತು / ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ 2004ರ ಜನವರಿ 1ರಂದು ಅಥವಾ ತದನಂತರ ಕರ್ತವ್ಯಕ್ಕೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ಕೇಂದ್ರ ಸರ್ಕಾರ 2023ರ ಮಾರ್ಚ್ 3 ರಂದು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅರ್ಹ ಅಧಿಕಾರಿಗಳನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.