ಕಂಪ್ಲಿ : ಕಂಪ್ಲಿ ತಾಲ್ಲೂಕಿನಲ್ಲಿ ಜಿಲ್ಲೆಯಲ್ಲಿ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದ್ದು, ಬುಧವಾರರಂದು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲಿ ಸಂಚರಿಸಿತು. ಸಂಚಾರದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.
ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು. ಜಾಥಾವನ್ನು ಪ್ರತೀ ಗ್ರಾಮಗಳಲ್ಲಿಯೂ ಕಳಶ ಹಿಡಿದು, ಪೂರ್ಣ ಕುಂಭ ಹೊತ್ತ ಮಹಿಳೆಯರು, ನೇತಾರರ ವೇಷ ಭೂಷಣಗಳನ್ನು ಧರಿಸಿದ ವಿದ್ಯಾರ್ಥಿಗಳು, ಹಲಗೆ ಮತ್ತು ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು.
ನಂತರ ಕಂಪ್ಲಿ ತಾಸಿಲ್ದಾರ್ ಎಸ್ ಶಿವರಾಜ್ ಶಿವಪುರ್ ಅವರ ಮಾತನಾಡಿ ರಾಜ್ಯ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯಲು ಕಾರಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಕ ಅಧಿಕಾರಿಗಳಾದ ಆರ್ ಕೆ ಶ್ರೀಕುಮಾರ್ ಕಂಪ್ಲಿ ಪುರಸಭೆ ಮುಖ್ಯ ಅಧಿಕಾರಿಗಳು ದುರ್ಗಣ್ಣ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಂಪ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಂಪ್ಲಿ ತಾಲೂಕಿನ ವಿವಿಧ ಶಾಲೆ ಮುಖ್ಯ ಗುರುಗಳು. ಹಾಗೂ ಕಂಪ್ಲಿ ತಾಲೂಕಿನ ವಿವಿಧ ಶಾಲೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು