ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು.
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಆಂಗ್ಲರು ಭಾರತಕ್ಕೆ ಆರಂಭದಲ್ಲೇ ಶಾಕ್ ನೀಡಿದರು.
ಗಮನಿಸಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲವೇ: ಈ ಕೂಡಲೇ ಈ ಕೆಲಸ ಮಾಡಿ ನೋಡಿ!
ಕೇವಲ 33 ರನ್ ಕಲೆ ಹಾಕುವಷ್ಟರಲ್ಲೇ ಭಾರತ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕ ಬ್ಯಾಟರ್ ಜೈಸ್ವಾಲ್ 10, ಶುಭ್ಮನ್ ಗಿಲ್ ಶೂನ್ಯ (0) ಹಾಗೂ ರಜತ್ ಪಟೀದಾರ್ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಸಂಕಷ್ಟದಲ್ಲಿದ್ದ ಭಾರತಕ್ಕೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಆಸರೆಯಾದರು. ರವೀಂದ್ರ ಜಡೇಜಾ ಜೊತೆ ಸೇರಿಕೊಂಡು ಜವಾಬ್ದಾರಿಯುತವಾಗಿ ಬ್ಯಾಟ್ ಬೀಸಿದರು. 174 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ನೆರವಿನೊಂದಿಗೆ ಶತಕ (111*) ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 11ನೇ ಶತಕ ದಾಖಲಿಸಿದರು.