ಕೋಲ್ಕತ್ತಾ: ನಟಿ ಮತ್ತು ಸಂಸದೆ ಮಿಮಿ ಚಕ್ರವರ್ತಿ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಪಕ್ಷದ ಸ್ಥಳೀಯ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ರಾಜೀನಾಮೆ ನೀಡಿರುವುದಾಗಿ ಜಾದವ್ಪುರದ ಸಂಸದೆ ಹೇಳಿದ್ದಾರೆ.
ನಾನು ಜಾದವ್ಪುರ ಅಭಿವೃದ್ಧಿಗಾಗಿ ಕನಸು ಕಂಡಿದ್ದೆ. ಆದರೆ ನಾನು ಸಾಕಷ್ಟು ಅಡೆತಡೆಗಳನ್ನು ಎದುರಿಸಿದ್ದೇನೆ. ಚಲನಚಿತ್ರದ ಹಿನ್ನೆಲೆಯಿಂದ ಬಂದವರು ಕೆಲಸ ಮಾಡುವುದಿಲ್ಲ ಎಂದು ಹೇಳುವುದು ತುಂಬಾ ಸುಲಭ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಂಗಾಳದ ಜನಪ್ರಿಯ ಚಲನಚಿತ್ರ ತಾರೆಯಾದ ಮಿಮಿ ಚಕ್ರವರ್ತಿ, 2019 ರಲ್ಲಿ ಜಾದವ್ಪುರದಿಂದ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ರಾಜಕೀಯ ಪ್ರಮುಖರಾದ ಬಿಜೆಪಿಯ ಅನುಪಮ್ ಹಜ್ರಾ ಮತ್ತು ಸಿಪಿಎಂನ ಬಿಕಾಶ್ ರಂಜನ್ ಭಟ್ಟಾಚಾರ್ಯರನ್ನು ಸೋಲಿಸಿದ್ದರು.
ಬಂಗಾಳದ ಮತ್ತೊಬ್ಬ ನಟ ಸಂಸದೆ ನುಸ್ರತ್ ಜಹಾನ್ ಅವರು ಸಂದೇಶಖಾಲಿಯಲ್ಲಿ ತೃಣಮೂಲ ನಾಯಕರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಇದೇ ಹೊತ್ತಿನಲ್ಲಿ ಮಿಮಿ ಚಕ್ರವರ್ತಿ ಸ್ಥಳೀಯ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.