ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 15 ನೇ ಬಜೆಟ್ ಮಂಡನೆ ಮಾಡಿದ್ದು, ನಗರದಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಫ್ರೋ ಯುರಾಲಜಿ ಆಸ್ಪತ್ರೆಯನ್ನು 100 ಹಾಸಿಗೆಗೆ ಉನ್ನತೀಕರಿಸಲಾಗಿದೆ. ಕೆ.ಆರ್ ಆಸ್ಪತ್ರೆ ಆವರಣದಲ್ಲಿ 75 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಿಸಿ ಸಿಎಂ ತವರು ಜಿಲ್ಲೆಯಾದ ಮೈಸೂರಿಗೆ ಬಜೆಟ್ʼನಲ್ಲಿ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಇನ್ನೂ ಜೊತೆಗೆ 56 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ, 116 ಕೋಟಿ ರೂ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದಾರೆ.
Coffee Vs Tea: ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀ ನಡುವಿನ ವ್ಯತ್ಯಾಸಗಳು: ಯಾವುದು ಆರೋಗ್ಯಕರ..?
ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಹಾಗೂ ಇಂಟರ್ನೆಟ್ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.