ಕೊಟ್ಟೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಪಕ್ಷದ ಮುಖ್ಯ ಅಜೆಂಡಾ ಆಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರ ಹಂತದಿಂದಲೇ ಪ್ರಚಾರ ಆರಂಭಿಸಲಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಪಕ್ಷದ ಎಲ್ಲ ಮುಖಂಡರ ಜತೆ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಜೆಡಿಎಸ್ನೊಂದಿಗೆ ಹೊಂದಾಣಿಕೆ ವಿರುದ್ಧವಾಗಲಿ ಅಥವಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತೆ ಯಾರೊಬ್ಬರೂ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ ಎಂದರು.
ಖಾಲಿ ಹೊಟ್ಟೆಯಲ್ಲಿ ಬೆಲ್ಲ ಬೆರೆಸಿದ ಜೀರಿಗೆ ನೀರು ಕುಡಿಯುವುದರಿಂದ ಆಗುವ ಪ್ರಯೋಜಗಳೇನು ಗೊತ್ತಾ..?
ಕೇಂದ್ರ ಸರ್ಕಾರ ಯೋಜನೆಗಳ ಕುರಿತಾಗಿ ಬೂತ್ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ಮಾಹಿತಿ ನೀಡಿ ಜಾಗೃತಿ ಮೂಡಿಸಲಿದ್ದಾರೆ. ದೇಶದಲ್ಲಿ ಬಿಜೆಪಿ ಪರ ಅಲೆ ಇದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವತ್ತ ಮುಂದಾಗಿದ್ದೇವೆ ಎಂದರು. ಬಿ.ವೈ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತಂದಿದೆ. ಪಕ್ಷದ ಗೆಲುವಿಗಾಗಿ ಅವರು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.