ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯನವರು ರಾಜ್ಯದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ ಇದರ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Siddaramaiah Budget: ಬಜೆಟ್ʼನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು ? ಇಲ್ಲಿದೆ ಪಿನ್ ಟು ಪಿನ್ ಮಾಹಿತಿ!
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯನವರು ಕಳಪೆ ಬಜೆಟ್ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ. ಹದಿನಾಲ್ಕು ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.
Karnataka Budget 2024: ಬಜೆಟ್ʼನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆಯಾಗಿದೆ ಗೊತ್ತಾ: ಇಲ್ಲಿದೆ ವಿವರ!
ಏಳನೇ ವೇತನ ಆಯೋಗದ ಅನುಷ್ಠಾನಕ್ಕೆ ಸ್ಪಷ್ಟ ಘೋಷಣೆಯಿಲ್ಲ. ಓಪಿಎಸ್ ಪುನರ್ ಜಾರಿ ಬಗ್ಗೆ ಚಕಾರ ಎತ್ತಿಲ್ಲ. ವರುಣ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿ ಕೊಟ್ಟು, ಬೇರೆ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲ. 27,353 ಸಾವಿರ ಕೋಟಿ ರಾಜಸ್ವ ಕೊರತೆ ಬಜೆಟ್ ಮಂಡಿಸಿರುವುದು, ರಾಜ್ಯ ಆರ್ಥಿಕ ದಿವಾಳಿಯಾಗುತ್ತಿರುವುದರ ಸ್ಪಷ್ಟ ಸೂಚನೆಯಾಗಿದೆ. ಕಾಂಗ್ರೆಸ್ ಆಡಳಿತದಿಂದ ರಾಜ್ಯ ದಿವಾಳಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಣಕಾಸು ಪರಿಸ್ಥಿತಿಯನ್ನು ದಿವಾಳಿಯಂಚಿಗೆ ತಂದು ನಿಲ್ಲಿಸುವ ಅತ್ಯಂತ ಕಳಪೆ ಬಜೆಟ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.