ರಾಮನಗರ: ಐದು ಗ್ಯಾರಂಟಿ ಯೋಜನೆಯನ್ನು ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂದು ಜಿಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಬಜೆಟ್ನಲ್ಲಿ ರಾಮನಗರ ಜಿಲ್ಲೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ವಿಚಾರದ ಬಗ್ಗೆ ಮಾತನಾಡಿ, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷ ಸಿಲುಕಿದೆ.
ಹಾಗಾಗಿ ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ. ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ ಅನುದಾನವನ್ನೆ ಇಟ್ಟುಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗೂ ತಾಲೂಕು ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಪಕ್ಷ ಗಮನಹರಿಸಿಲ್ಲ ಎಂದು ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಮಾತನಾಡಿ,
ಖಾಲಿ ಹೊಟ್ಟೆಯಲ್ಲಿ ಬೆಲ್ಲ ಬೆರೆಸಿದ ಜೀರಿಗೆ ನೀರು ಕುಡಿಯುವುದರಿಂದ ಆಗುವ ಪ್ರಯೋಜಗಳೇನು ಗೊತ್ತಾ..?
ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡಾ ದೆಹಲಿಗೆ ಹೋಗುತ್ತಿದ್ದೀನಿ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡ್ತೀವಿ. ಹಳೇ ಮೈಸೂರು ಭಾಗದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಹಳೇ ಮೈಸೂರು ಭಾಗದ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.