ಕೋಲಾರ: ಕೋಲಾರದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಜಾತಾ ಅದ್ದೂರಿಯಾಗಿ ಜರುಗಿದ್ದು, ಪುಟಾಣಿ ಮಕ್ಕಳು ನಗರದೆಲ್ಲಡೆ ಸ್ಕೇಟಿಂಗ್ ಮಾಡುವ ಮೂಲಕ ಅಭಿಯಾನ ನಡೆಸಿದ್ದಾರೆ.
ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೋಲಾರ ನಗರದ ಕುವೆಂಪು ಪಾರ್ಕ್ನಿಂದ ಆರಂಭವಾದ ಈ ಜಾತಾ,
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ಕಾರ್ಯಕ್ರಮಕ್ಕೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಅವರು ಚಾಲನೆ ನೀಡಿದ್ದು ವಿಶೇಷವಾಗಿತ್ತು.