ದಾವಣಗೆರೆ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ವಿರುದ್ಧ ಅಸಮಾಧಾನ ಹೊರಹಾಕುವ ವೇಳೆ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಬಗ್ಗೆ ದನಿ ಎತ್ತಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಘಟಕ ದೂರು ನೀಡಿದೆ.
ಬಟ್ಟೆ ಒಗೆದ ತಕ್ಷಣ ವಾಷಿಂಗ್ ಮಷೀನ್ ಮುಚ್ಚಬಾರದಂತೆ! – ಕಾರಣ ಏನು ಗೊತ್ತಾ!?
ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆಯಿಂದ ದೇಶದ ಗೌರವಕ್ಕೆ ಮತ್ತು ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಇದು ಅಸಾಂವಿಧಾನಿಕ ಹೇಳಿಕೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮೂಲಕ ಎಸ್ಪಿ ಅವರಿಗೆ ಬಿಜೆಪಿ ಘಟಕ ದೂರು ನೀಡಿದೆ. ಮಹಾನಗರ ಪಾಲಿಕೆಯ ಸದಸ್ಯ ಶಿವಪ್ರಕಾಶ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಡಿ.ಕೆ ಸುರೇಶ್ ಹೇಳಿದ್ದೇನು?
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಕೇಂದ್ರದವರು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂಥವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದರು.