ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಒಟ್ಟು 1206 ಇಂಡಿಯನ್ ಫಾರೆಸ್ಟ್ ಸರ್ವೀಸ್, ಸಿವಿಲ್ ಸರ್ವೀಸ್ ಪರೀಕ್ಷೆ ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿಗಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮುಂದಿನ ಮಾರ್ಚ್ 5ರೊಳಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ
ಪ್ರಕ್ರಿಯೆ ಪೂರ್ಣ ಮಾಹಿತಿಸಂಸ್ಥೆ ಹೆಸರು: ಕೇಂದ್ರ ಲೋಕಸೇವಾ ಆಯೋಗ (UPSC)ಹುದ್ದೆ ಹೆಸರು: ಇಂಡಿಯನ್ ಫಾರೆಸ್ಟ್ ಸರ್ವೀಸ್, ಸಿವಿಲ್ ಸರ್ವೀಸ್ ಪರೀಕ್ಷೆ ಹುದ್ದೆಖಾಲಿ ಹುದ್ದೆ ಸಂಖ್ಯೆ: 1206ಇಂಡಿಯನ್ ಫಾರೆಸ್ಟ್ ಸರ್ವೀಸ್ ಪರೀಕ್ಷೆ- 150ಸಿವಿಲ್ ಸರ್ವೀಸ್ ಪರೀಕ್ಷೆ -1056ಪೋಸ್ಟಿಂಗ್: ಭಾರತದಲ್ಲಿ ಎಲ್ಲಿ ಬೇಕಾದರೂಅರ್ಜಿ ಸಲ್ಲಿಕೆ ಕೊನೆ ದಿನಾಂಕ: 2024 ಮಾರ್ಚ್ 5ಶೈಕ್ಷಣಿಕ ಅರ್ಹತೆಸಿವಿಲ್ ಸರ್ವೀಸ್ ಪರೀಕ್ಷೆ ಹುದ್ದೆ ಹಾಗೂ ಇಂಡಿಯನ್ ಫಾರೆಸ್ಟ್ ಸರ್ವೀಸ್ ಪರೀಕ್ಷೆಗೆ ಬರೆಯುವವರು ಪದವಿ ಪೂರ್ಣಗೊಳಿಸಿರಬೇಕು ಎಂದು ಕೆಪಿಎಸ್ಸಿ ಅಧಿಸೂಚನೆ ಮಾಹಿತಿ ನೀಡಿದೆ.ವಯಸ್ಸಿನ ಮಿತಿ ವಿವರಕೇಂದ್ರ ಸರ್ಕಾರಿ ವ್ಯಾಪ್ತಿಯ ಈ ಮೇಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 32 ವರ್ಷ ಮೀರಿರಬಾರದು ಎಂದು ಕೇಂದ್ರ ಲೋಕಸೇವಾ ಆಯೋಗವು ಕಟ್ಟುನಿಟ್ಟಾಗಿ ಹೇಳಿದೆ.
ಅರ್ಜಿ ಸಲ್ಲಿಸುವ ಪರಿಶಿಷ್ಟ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ, ಇತರೆ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ಇನ್ನು PwBD ಅಭ್ಯರ್ಥಿಗಳಿಗೆ ಒಟ್ಟು 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ತಿಳಿಸಲಾಗಿದೆ.ಆಯ್ಕೆ ಹೇಗೆ?ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಕೆಪಿಎಸ್ಸಿ ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ಬಳಿಕ ವೈಯಕ್ತಿಕ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಇಲ್ಲಿ ಉತ್ತಮರನ್ನು ಸಂಸ್ಥೆ ಆಯ್ಕೆ ಮಾಡುತ್ತದೆ. ಆಯ್ಕೆ ಆಗುವವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುವುದು. ಮಾಸಿಕ ವೇತನ ಎಷ್ಟೆಂದು ನಿಗದಿ ಮಾಡಲಾಗಿಲ್ಲ. ಶುಲ್ಕದ ವಿವರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಜನಾಂಗದ ಮಹಿಳೆಗೆ/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರೆ ಎಲ್ಲ ಅಭ್ಯರ್ಥಿಗಳಿಗೂ 100/- ರೂಪಾಯಿ ನಿಗದಿ ಮಾಡಲಾಗಿದೆ. ಈ ಹಣವನ್ನು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪಾವತಿಸಬೇಕು.ಈ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಸಲ್ಲಿಸಬೇಕು.