ಯಾದಗಿರಿ:- ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ದುರ್ಮರಣ ಹೊಂದಿದ ಘಟನೆ ಜರುಗಿದೆ.
ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು ಎನ್ನಲಾಗಿದೆ. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಕೊಲೆನಾ ಇಲ್ಲಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ