ಭಾರತ ಸೇರಿ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳವಾಗಿದೆ. ಕೆಲವೆಡೆ ಏರಿಕೆ ಗಣನೀಯವಾಗಿ ಹೆಚ್ಚಿದೆ. ಭಾರತದಲ್ಲಿ ಗ್ರಾಮ್ಗೆ 10 ರೂನಷ್ಟು ದುಬಾರಿಯಾಗಿದೆ. ಆದರೆ, ಕಳೆದ 10 ದಿನಗಳ ಹಿಂದಿನ ಬೆಲೆಗಿಂತ ಕಡಿಮೆ ಇದೆ ಎನ್ನುವುದು ಚಿನ್ನ ಪ್ರಿಯರ ಸಮಾಧಾನ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 19ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ