ಗದಗ:- ಬಿರು ಬೇಸಿಗೆ ದಿನಗಳಲ್ಲಿ ನೀರಿಲ್ಲದೇ ಜನರು ಪರದಾಟ ನಡೆಸುತ್ತಿದ್ದು, ಇತ್ತ ಪೈಪ್ ಒಡೆದು ಕುಡಿಯುವ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.
ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರ ಗ್ರಾಮದ ಬಳಿ ಜರುಗಿದೆ. ಗದಗ ಬೆಟಗೇರಿ ಅವಳಿ ನಗರದ 24*7 ಕುಡಿಯುವ ನೀರಿನ ಸಂಪರ್ಕದ ಪೈಪ್ ಲೈನ್ ಇದ್ದು, ಹಲವಾರು ದಿನಗಳಿಂದ ಅಧಿಕಾರಿಗಳ ಗಮನಕ್ಕೆ ತಂದರೂ ಡೋಂಟ್ ಕೇರ್ ಎನ್ನುತ್ತಿದ್ದಾರೆ.
ಅಪಾರ ಪ್ರಮಾಣದ ನೀರು ಸುಖಾಸುಮ್ಮನೆ ಚರಂಡಿ ಪಾಲಾಗುತ್ತಿದೆ. ಗದಗ ಜಿಲ್ಲೆ ಜನರ ದಾಹ ಇಂಗಿಸುವ ಕುಡಿಯುವ ನೀರಿನ ಸಂಪರ್ಕದ ಪೈಪ್ ಲೈನ್ ಇದಾಗಿದ್ದು, ಅಧಿಕಾರಿಗಳ ನಿರ್ಲಕ್ಷತನಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.