ಅಮೆರಿಕದ ಸ್ಯಾನ್ಡಿಯಾಗೊ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಯಾನ್ಡಿಯಾಗೊದ ಯುನಿವರ್ಸಿಟಿ ಸಿಟಿ ಪ್ರದೇಶದ ಶಾಪಿಂಗ್ ಮಾಲ್ನ ಬಳಿ ಗುಂಡಿನ ದಾಳಿ ನಡೆದಿದ್ದು ಆರೋಪಿ ಪರಾರಿಯಾಗಿದ್ದಾನೆ.
ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ ಎಂದು ಸ್ಯಾನ್ಡಿಯಾಗೊ ಪೊಲೀಸ್ ಇಲಾಖೆಯ ಮುಖ್ಯಾಧಿಕಾರಿ ರಾಬರ್ಟ್ ಹೇಮ್ಸ್ ಮಾಹಿತಿ ನೀಡಿದ್ದಾರೆ.