ರಾಜ್ಕೋಟ್: ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆದಿದೆ. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಅಂತರದ ಗೆಲುವನ್ನು ಇಂಗ್ಲೆಂಡ್ ವಿರುದ್ಧ ದಾಖಲಿಸಿದೆ. ಈ ಗೆಲುವಿನ ಮೂಲಕ ಮತ್ತೊಂದು ವಿಶೇಷ ಸಾಧನೆಗೂ ಪಾತ್ರವಾಗಿದೆ.
ರನ್ ಮಷಿನ್ ಕಿಂಗ್ ಕೊಹ್ಲಿ ದಾಖಲೆಯನ್ನೇ ಸರಿಗಟ್ಟಿದ ಯಶಸ್ವಿ ಜೈಸ್ವಾಲ್!
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸುವ ಮೂಲಕ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್ಗಳ ಗೆಲುವು ಸಾಧಿಸಿದ ಭಾರತ ಅತಿಹೆಚ್ಚು ರನ್ಗಳ ಅಂತರದಲ್ಲಿ ಗೆಲುವು ಸಾಧಿಸಿದ ಟಾಪ್-10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಗಿಟ್ಟಿಸಿಕೊಂಡಿದೆ.
ರೋಹಿತ್ ಶರ್ಮಾ ನಾಯಕದ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್ಗಳ ಅಂತರದಿಂದ ಗೆಲುವು ಸಾಧಿಸಿದ ಟಾಪ್-10 ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ ಭಾರತ ತಂಡ ಇದುವರೆಗೆ ಒಟ್ಟು 577 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇಂಗ್ಲೆಂಡ್ ವಿರುದ್ಧ ಸಾಧಿಸಿದ ಈ ಗೆಲುವು ಭಾರತದ ಪಾಲಿಗೆ ಐತಿಹಾಸಿಕ ಸಾಧನೆಯಾಗಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾ 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ 372 ರನ್ಗಳಿಂದ ಗೆದ್ದಿದ್ದೇ ಇದುವರೆಗಿನ ಬೃಹತ್ ಅಂತರದ ಗೆಲುವಿನ ದಾಖಲೆಯಾಗಿತ್ತು.