ಬೆಂಗಳೂರು ಗ್ರಾಮಾಂತರ: ಮದುವೆ ಮುಗಿಸಿಕೊಂಡು ಮನೆಗೆ ಹಿಂದಿರುವಾಗ ಅಪಘಾತ ಸಂಭವಿಸಿ ಯುವಕನೊಬ್ಬ ಮಸಣ ಸೇರಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಮೇಸ್ಟ್ರು ಮನೆ ಕ್ರಾಸ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಪವನ್ (26) ಅಪಘಾತದಲ್ಲಿ ಸಾವನ್ನಪ್ಪಿದ ಯುವಕ.
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ ಇನ್ನೂ ಹಣ ಬಂದಿಲ್ಲವೇ : ಹೀಗೆ ಮಾಡಿ ಖಂಡಿತಾ ಬರುತ್ತೆ ನೋಡಿ!
ಮೃತ ಯುವಕ ಹೊಸಕೋಟೆ ತಾಲೂಕಿನ ಇಟ್ಟಸಂದ್ರ ಗ್ರಾಮದ ನಿವಾಸಿ. ಮದುವೆ ಮುಗಿಸಿ ವಾಪಾಸಾಗುವಾಗ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಪುತ್ರ ಪವನ್ನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.