ಮಂಗಳೂರು:- ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.
ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡನ್ನು ಕಳಿಸಿದ್ದಾರಂತೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕೇರಳ ಮೂಲದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. ಈ ಬಗ್ಗೆ ದೇಗುಲದ ಆಡಳಿತ ಮಂಡಳಿಯ ಗಮನಕ್ಕೆ ಬಾರದೇ ಇದ್ದಿದ್ದು ಅಚ್ಚರಿ ಅನ್ನೋದು ಭಕ್ತರ ಅಸಮಾಧಾನ. ಹೀಗಾಗಿ ಇದರ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಲಾಗಿದೆ
2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮಕ್ಮಲ್ ಟೋಪಿ ಹಾಕುತ್ತಿರೋದು ಗಮನಕ್ಕೆ ಬಂದಿದೆ. ಕೋಟಿ ಕೋಟಿ ದುಡ್ಡನ್ನು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕಾಗಿದೆ.