ಹಿಂದಿ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಘಾತದಿಂದ ಇಂದು (ಫೆ.20) ನಿಧನರಾಗಿದ್ದಾರೆ.
ಹಲವು ದಿನಗಳಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ರಿತುರಾಜ್ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 59 ವರ್ಷದ ರಿತುರಾಜ್ ಸಿಂಗ್ ಕೊನೆಯುಸಿರೆಳೆದಿದ್ದಾರೆ ಎಂದು ರಿತುರಾಜ್ ಸಿಂಗ್ ಆಪ್ತ ನಟ ಅಮಿತ್ ಬೆಹ್ಲ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಬೆಹ್ಲ್, ಸ್ನೇಹಿತ ರಿತುರಾಜ್ ಸಿಂಗ್ ಮುಂಜಾನೆ 12:30ಕ್ಕೆ ನಿಧನರಾದರು. ಹಲವು ದಿನಗಳಿಂದ ಅಸ್ವಸ್ಥರಾಗಿದ್ದ ರಿತುರಾಜ್ ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆಮೇಲೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದರು. ಮತ್ತೆ ಈ ಸಮಸ್ಯೆಯಿಂದ ಅಹಿತಕರ ಘಟನೆ ಸಂಭವಿಸಿದೆ ಎಂದರು. ನಟನ ನಿಧನಕ್ಕೆ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ರಿತುರಾಜ್ ಅವರು ಬನೇಗಿ ಅಪ್ನಿ ಬಾತ್, ಜ್ಯೋತಿ ಹಿಟ್ಲರ್ ದೀದಿ, ಶಪತ್ ವಾರಿಯರ್ ಹೈ, ಸೇರಿದಂತೆ ಹಲವು ಶೋಗಳಲ್ಲಿ ನಟಿಸಿದ್ದಾರೆ. ಲಾಡೋ 2 ಸೀರಿಯಲ್ನಲ್ಲಿ ಬಲವಂತ ಚೌಧರಿ ಪಾತ್ರದಲ್ಲಿ ನಟಿಸಿದ್ದಾರೆ. ಅನುಪಮಾ ಸೀರಿಯಲ್ ರೀತುರಾಜ್ಗೆ ಹೆಚ್ಚು ಜನಪ್ರಿಯತೆ ಕೊಟ್ಟಿತ್ತು. ವರುಣ್ ಧವನ್ ನಟನೆಯ ‘ಬದ್ರಿನಾಥ್ ಕಿ ದುಲ್ಹನಿಯಾ’, ‘ಯಾರಿಯಾನ್ 2’ ಚಿತ್ರದಲ್ಲಿ ರಿತುರಾಜ್ ನಟಿಸಿದ್ದಾರೆ.