ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಆಗಿದೆ.
ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ ಪಡೆದ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.
ದೇಶದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆ ಲಾಸಲ್ ಗಾಂವ್ ಕೃಷಿ ಉತ್ಪಾದನಾ ಮಾರುಕಟ್ಟೆಯಲ್ಲಿ ಈರುಳ್ಳಿ ರಖಂ ಮಾರಾಟ ಬೆಲೆ ಶೇ.40ರಷ್ಟು ಏರಿಕೆ ದಾಖಲಿಸಿದೆ.
ಈರುಳ್ಳಿ ಈಗ ಪ್ರತೀ ಕ್ವಿಂಟಾಲ್ ಬೆಲೆ 1,280 ರೂ.ಗಳಿಂದ 1,400 ರೂ.ಗೆ ಏರಿಕೆ ಕಂಡಿದ್ದು, ಕನಿಷ್ಠ ಬೆಲೆ 1 ಸಾವಿರ ರೂ. ಹಾಗೂ ಗರಿಷ್ಠ ಬೆಲೆ ಕ್ವಿಂಟಾಲ್ಗೆ 2,100 ರೂ.ಹೆಚ್ಚಳವಾಗಿದೆ.
ಬೆಳ್ಳುಳ್ಳಿ ದರ ಏರಿಕೆಯಾಗಿದ್ದ ಬೆನ್ನಲ್ಲೇ ಇದೀಗ ಈರುಳ್ಳಿ ಬೆಲೆಯು ಏರಿಕೆಯಾಗಿರುವುದು ಗ್ರಾಹಕರಿಗೆ ಆತಂಕ ಉಂಟುಮಾಡಿದೆ.