ಬೆಂಗಳೂರು:- HDK ಕೇಸರಿ ಶಾಲು ಕಿತ್ತೊಗೆಯುವ ಕಾಲ ದೂರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಮತ್ತು ಬಿಜೆಪಿ ಮೈತ್ರಿಗೆ ಸೋಲಾಗಿದೆ. ಇನ್ನು ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದು, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ಈ ಫಲಿತಾಂಶ ಸ್ಪಷ್ಟಪಡಿಸಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಮುಖವಾಡ ಕಳಚಿದೆ ಎಂದು ಟಾಂಗ್ ಕೊಟ್ಟಿದ್ದಾರೆ.
JDS ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಅಭಿನಂದನೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವು. ಬಿಜೆಪಿ, ಜೆಡಿಎಸ್ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ರೂ ಸೋಲು ಇದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, H.D.ಕುಮಾರಸ್ವಾಮಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ನಡುವಿನ ಮೈತ್ರಿ ಅಷ್ಟೇ. 2 ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ. ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ. ಹೆಚ್ಡಿಕೆ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದ್ದಾರೆ.