ಬೆಂಗಳೂರು:– ರಾಜ್ಯ ಸರ್ಕಾರವು ಸುಗಂಧದ್ರವ್ಯ ಫ್ಯಾಕ್ಟರಿಯಲ್ಲಿ ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಿಸಿದ್ದಾರೆ. ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿತ್ತು. ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು ಎನ್ನಲಾಗಿದೆ.