ಮಾ.22 ರಂದು ಐಪಿಎಲ್ಗೆ ಚಾಲನೆ ನೀಡಲು ಎದುರು ನೋಡುತ್ತಿದ್ದೇವೆ. 15 ದಿನಗಳ ವೇಳಾಪಟ್ಟಿಯನ್ನು ಮೊದಲು ಬಿಡುಗಡೆ ಮಾಡಲಿದ್ದೇವೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದಾರೆ.
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಗೊಂಡಿಲ್ಲ.
ಲೋಕಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ ಆರಂಭದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಚುನಾವಣೆಯ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಧುಮಾರ್, ಇದು ವಿದೇಶದಲ್ಲಿ ನಡೆಯುವುದಿಲ್ಲ. ಅದಕ್ಕಾಗಿಯೇ ನಾವು ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ನಾವು ಸ್ಥಳ ನಿಯೋಜನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಲೀಗ್ ಅನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. 2009 ರಲ್ಲಿ ಐಪಿಎಲ್ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. 2014 ರಲ್ಲಿ ಮೊದಲ 20 ಪಂದ್ಯಗಳನ್ನು ಯುಎಇಯಲ್ಲಿ ಮತ್ತು ಉಳಿದ ಪಂದ್ಯಗಳು ಭಾರತದಲ್ಲಿ ನಡೆದಿತ್ತು. ಆದರೆ 2019 ರಲ್ಲಿ ಲೋಕಸಭಾ ಚುನಾವಣೆ ಇದ್ದರೂ ಭಾರತದಲ್ಲೇ ಐಪಿಎಲ್ ನಡೆದಿತ್ತು.
ಟಿ20 ವಿಶ್ವಕಪ್ ಜೂನ್ 1 ರಿಂದ ಪ್ರಾರಂಭವಾಗಲಿದ್ದು, ಮೇ ಅಂತ್ಯದ ವೇಳೆಗೆ ಐಪಿಎಲ್ ಕೊನೆಗೊಳ್ಳುವ ನಿರೀಕ್ಷೆಯಿದೆ. ಸಂಪ್ರದಾಯದಂತೆ ಲೀಗ್ನ ಮೊದಲ ಪಂದ್ಯ ಹಿಂದಿನ ವರ್ಷದ ಫೈನಲ್ನಲ್ಲಿ ಸೆಣಸಾಡಿದ ತಂಡಗಳ ನಡುವೆ ನಡೆಯಲಿದೆ.