ಬಿಹಾರ:- ಇಲ್ಲಿನ ಲಖಿಸರಾಯ್ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದ್ದು,ಅಪರಿಚಿತ ವಾಹನವೊಂದು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿರುವ ಘಟನೆ ಜರುಗಿದೆ
ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್ನಿಂದ ಸಿಕಂದ್ರ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವೇಳೆ ಆಟೋರಿಕ್ಷಾದಲ್ಲಿ 15 ಮಂದಿ ಇದ್ದರು. ಅಪಘಾತದ ರಭಸಕ್ಕೆ ಆಟೊರಿಕ್ಷಾ ಜಖಂಗೊಂಡಿತ್ತು. ಮೃತ ಒಂಬತ್ತು ಮಂದಿಯಲ್ಲಿ ಒಬ್ಬನನ್ನು ಚಾಲಕ ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಮೊದಲು ಕಳುಹಿಸಲಾಯಿತು, ಆದರೆ ಅವರ ಸ್ಥಿತಿ ಗಂಭೀರವಾದ ಕಾರಣ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದ ಎಂಟು ಮಂದಿ ಬಲಿಪಶುಗಳು ಮತ್ತು ಗಾಯಗೊಂಡವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಪರಿಚಿತ ವಾಹನ ಪತ್ತೆಗೆ ತನಿಖೆ ಮುಂದುವರೆದಿದೆ.