ಫೆಬ್ರವರಿ 23 ರಂದು ರಾಂಚಿಯಲ್ಲಿ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಭಾರತ ತಂಡದಿಂದ ಹಿರಿಯ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲಾಗಿದೆ. ಬಿಸಿಸಿಐ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಇವರ ಸ್ಥಾನಕ್ಕೆ ಮುಖೇಶ್ ಕುಮಾರ್ ಅವರನ್ನು ಮತ್ತೇ ತಂಡಕ್ಕೆ ಕರೆಸಿಕೊಳ್ಳಲಾಗಿದೆ.
“ರಾಂಚಿಯಲ್ಲಿ ನಡೆಯುವ ನಾಲ್ಕನೇ ಟೆಸ್ಟ್ ಪಂದ್ಯದ ಭಾರತ ತಂಡದಿಂದ ಜಸ್ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಅವರು ಆಡಿದ್ದ ಕ್ರಿಕೆಟ್ ಅನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಫೆಬ್ರವರಿ 23 ರಂದು ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ: ಪೂರ್ಣ ವೇಳಾಪಟ್ಟಿ ಹೀಗಿದೆ
ಜಸ್ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಆಟಗಾರರು ಕೂಡ ನಾಲ್ಕನೇ ಟೆಸ್ಟ್ ಪಂದ್ಯದ ಭಾರತ ತಂಡದಲ್ಲಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದ ಬಳಿಕ ವೇಗಿ ಮುಖೇಶ್ ಕುಮಾರ್ ಅವರನ್ನು ಭಾರತ ಟೆಸ್ಟ್ ತಂಡದಿಂದ ಬಿಡುಗಡೆಗೊಳಿಸಿ ಬಂಗಾಳ ಪರ ರಣಜಿ ಟ್ರೋಫಿ ಪಂದ್ಯ ಆಡಲು ಅವಕಾಶ ನೀಡಲಾಗಿತ್ತು. ಇದೀಗ ಬುಮ್ರಾಗೆ ವಿಶ್ರಾಂತಿ ನೀಡಿರುವುದರಿಂದ ಅವರ ಸ್ಥಾನಕ್ಕೆ ಮುಖೇಶ್ ಕುಮಾರ್ ಅವರನ್ನು ಮತ್ತೆ ಟೆಸ್ಟ್ ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಇನ್ನು ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ಕನ್ನಡಿಗ ಕೆಎಲ್ ರಾಹುಲ್, ಇನ್ನೂ ಸಂಪೂರ್ಣ ಗುಣಮುಖರಾಗದ ಕಾರಣ ಅವರನ್ನು ಕೈ ಬಿಡಲಾಗಿದೆ.