ಜೂನ್ 1 ರಿಂದ ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ 2024ರ ಚುಟುಕು ವಿಶ್ವಕಪ್ ನಡೆಯಲಿದ್ದು 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆಂದು ತೆಗೆದುಕೊಂಡಿರುವ ತೀರ್ಮಾನ ಸರಿಯಾಗಿದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ
ಫೆಬ್ರವರಿ 23 ರಂದು ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ: ಪೂರ್ಣ ವೇಳಾಪಟ್ಟಿ ಹೀಗಿದೆ
ಸುದೀರ್ಘ ಕಾಲದ ನಂತರ ಟಿ20 ತಂಡಕ್ಕೆ ಮರಳಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ, ತಮ್ಮ ನಾಯಕತ್ವದಲ್ಲಿ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ್ದರು. ಮಿಡ್ ಡೇ ಜೊತೆ ನಡೆಸಿದ ಸಂವಾದದಲ್ಲಿ ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲು ಸೂಕ್ತ ಆಯ್ಕೆ ಆಗಿದೆ ಎಂದು ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲು ರೋಹಿತ್ ಶರ್ಮಾ ಉತ್ತಮ ಆಯ್ಕೆಯಾಗಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯಾವ ರೀತಿ ಸತತವಾಗಿ 10 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು ಎಂಬ ನೆನಪು ಇನ್ನೂ ನೆನಪಿನಲ್ಲಿ ಉಳಿದಿದೆ. ಆದ್ದರಿಂದ ರೋಹಿತ್ ಶರ್ಮಾ ಅವರೇ ಅತ್ಯುತ್ತಮ ಆಯ್ಕೆಯಾಗಿದ್ದಾರೆ,” ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ.