ಬೆಂಗಳೂರು : ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.
ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.
ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.
ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು.
ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.