ರಾಂಚಿ: ಟೆಸ್ಟ್ ಕ್ರಿಕೆಟ್ನಲ್ಲಿ ಮಿಂಚುತ್ತಿರುವ ಟೀಂ ಇಂಡಿಯಾ (Team India) ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ (ICC Test Ranking) 14 ಸ್ಥಾನ ಜಿಗಿದು, ಟಾಪ್-20 ಸ್ಥಾನಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ (Ind vs Eng) ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ದ್ವಿಶತಕ ಸಿಡಿಸಿ ಮಿಂಚುತ್ತಿರುವ ಜೈಸ್ವಾಲ್ ಸದ್ಯದಲ್ಲೇ ವಿರಾಟ್ ಕೊಹ್ಲಿ ಅವರ ಅಪರೂಪದ ದಾಖಲೆಯೊಂದನ್ನು ಮುರಿಯುವ ಸನಿಹದಲ್ಲಿದ್ದಾರೆ. ಟೆಸ್ಟ್ ಸರಣಿಯೊಂದರಲ್ಲಿ ವೈಯಕ್ತಿಕವಾಗಿ ಗರಿಷ್ಠ ರನ್ ಗಳಿಸಿದ ಟೀಂ ಇಂಡಿಯಾದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಸನಿಹದಲ್ಲಿ ಜೈಸ್ವಾಲ್ ಇದ್ದಾರೆ. ವೈಯಕ್ತಿಕವಾಗಿ ಗರಿಷ್ಠ ರನ್ ಗಳಿಸಿದ ಬ್ಯಾಟರ್ಗಳ ಪೈಕಿ 774 ರನ್ ಗಳಿಸಿರುವ ಸುನೀಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಈಗಾಗಲೇ 3 ಪಂದ್ಯಗಳಲ್ಲಿ 545 ರನ್ ಗಳಿಸಿರುವ ಯುವ ಆಟಗಾರ ಯಶಸ್ವಿ ಜೈಸ್ವಾಲ್ಗೆ ಕೊಹ್ಲಿ ದಾಖಲೆ ಮುರಿಯಲು ಇನ್ನೂ 147 ರನ್ಗಳ ಅಗತ್ಯವಿದೆ