ಕೊನೆ ಸಚಿವ ಸಂಪುಟದಲ್ಲಿ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಪ್ರತಿ ಕ್ವಿಂಟಲ್ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್ಆರ್ಪಿ ಪ್ರತಿ ಕ್ವಿಂಟಲ್ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಬ್ಬಿನ ದರ ಪ್ರತಿ ಕ್ವಿಂಟಾಲ್ಗೆ 340 ರೂಪಾಯಿಗೆ ಹೆಚ್ಚಿಳ ಮಾಡಲಾಗಿದೆ. ಇದು ಕಬ್ಬಿನ ಐತಿಹಾಸಿಕ ಬೆಲೆಯಾಗಿದ್ದು, ಇದು ಪ್ರಸಕ್ತ 2023-24 ರ ಹಂಗಾಮಿನ ಕಬ್ಬಿನ ಎಫ್ಆರ್ಪಿಗಿಂತ ಸುಮಾರು ಶೇ.8ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು