ನಟಿ ರಕುಲ್ ಪ್ರೀತಿ ಸಿಂಗ್ ಸಖತ್ ಖುಷಿಯಲ್ಲಿದ್ದಾರೆ. ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ 5 ವರ್ಷಗಳ ಕಾಲ ಪ್ರೀತಿಸಿದ್ದ ಯುವಕನ ಕೈ ಹಿಡಿದಿರೋ ನಟಿ ಇದೀಗ ಮದುವೆಯಾದ ಬಳಿಕ ಮೊದಲ ಭಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ.
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇದೇ ಫೆ.21ರಂದು ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರವೇ ಆಹ್ವಾನ ನೀಡಲಾಗಿದ್ದು ಮದುವೆಯ ಬಳಿಕ ನಟಿ ಕೆಲವು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಮದುವೆಯಾದ ಎರಡು ದಿನಗಳ ಬಳಿಕ ದಂಪತಿ ಕ್ಯಾಮೆರಾ ಮುಂದೆ ಬಂದಿದ್ದಾರೆ.
ಜಾಕಿ ಭಗ್ನಾನಿ ಸಹೋದರ ನಿಕ್ಕಿ ಜೊತೆ ನವಜೋಡಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ವಧು ರಕುಲ್ ಮಾಡ್ರನ್ ಡ್ರಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗೋವಾದ ಪ್ರತಿಷ್ಟಿತ ಐಟಿಸಿ ಗ್ರ್ಯಾಂಡ್ನಲ್ಲಿ ರಕುಲ್ ಪ್ರೀತ್ ಸಿಂಗ್, ಜಾಕಿ ಭಗ್ನಾನಿ ಮದುವೆ ಸಮಾರಂಭ ಅದ್ದೂರಿಯಾಗಿ ನಡೆದಿದೆ.
ಹಲವು ವರ್ಷಗಳಿಂದ ಪ್ರೇಮದಲ್ಲಿದ್ದ ರಕುಲ್, ಜಾಕಿ ಗೋವಾದಲ್ಲಿ ಬೆಳಗ್ಗೆ ಸಿಖ್ ಸಂಪ್ರದಾಯದಂತೆ, ಸಂಜೆ ಸಿಂಧಿ ಸಂಪ್ರದಾಯದಂತೆ ವಿವಾಹವಾದರು. ರಕುಲ್, ಜಾಕಿ ವಿವಾಹಕ್ಕೆ ಬಾಲಿವುಡ್ ನ ನಟ, ನಟಿಯರು ಹಾಜರಾಗಿದ್ದರು. ವರುಣ್ ಧವನ್, ಅರ್ಜುನ್ ಕಪೂರ್, ಭೂಮಿ ಪೆಡ್ನೇಕರ್, ಇಶಾ ಡಿಯೋಲ್, ಡೇವಿಡ್ ಧವನ್, ಆಯುಷ್ಮಾನ್ ಖುರಾನಾ ಸೇರಿದಂತೆ ಸ್ಟಾರ್ ನಟ–ನಟಿಯರು ವಿವಾಹದಲ್ಲಿ ಭಾಗಿಯಾಗಿದ್ದರು.