ರಜತ್ ಪಾಟಿದರ್ ಕಳಪೆ ಆಟಕ್ಕೆ ಫ್ಯಾನ್ಸ್ ಬೇಸರ ಹೊರ ಹಾಕಿದ್ದಾರೆ. ರಾಂಚಿಯಲ್ಲಿ ನಡೆಯುತ್ತಿರುವ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಯುವ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಮತ್ತೊಮ್ಮೆ ವಿಫಲರಾಗಿದ್ದಾರೆ.
ಅನುಭವಿಗಳ ಅಲಭ್ಯತೆಯ ಮೇರೆಗೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ರಜತ್ ಪಾಟಿದಾರ್, ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇದುವರೆಗೆ ಒಂದೇ ಒಂದು ಅದ್ಭುತ ಇನ್ನಿಂಗ್ಸ್ ಆಡಿಲ್ಲ. ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದರಿಂದ ರಜತ್ ಫ್ಲಾಪ್ ಶೋ ಹೆಚ್ಚು ಚರ್ಚೆಗೆ ಬಂದಿರಲಿಲ್ಲ. ಆದರೀಗ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾದ ಇನ್ನಿಂಗ್ಸ್ ಸಂಕಷ್ಟದಲ್ಲಿದ್ದಾಗಲೂ ರಜತ್ ಬಿಗ್ ಇನ್ನಿಂಗ್ಸ್ ಆಡುವ ಯೋಚನೆ ಮಾಡಲಿಲ್ಲ. ಈ ಪಂದ್ಯದಲ್ಲಿ ರಜತ್ ಪಾಟಿದಾರ್ ಬ್ಯಾಟಿಂಗ್ ನೋಡಿದ ಟೀಂ ಇಂಡಿಯಾ ಅಭಿಮಾನಿಗಳು ಇವನಿಗಿಂತ ಕುಲ್ದೀಪ್ ಯಾದವೇ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಾರೆ ಎಂದಿದ್ದಾರೆ.