ಹಾವೇರಿ:- ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬೈಕ್ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ರಸ್ತೆ ಅಪಘಾತವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
ಘಟನೆಯಲ್ಲಿ ಓರ್ವ ಮಹಿಳೆ, ಓರ್ವ ಪುರುಷ ಹಾಗೂ ಒಂದು ಮಗು ಕೊನೆಯುಸಿರೆಳೆದಿದೆ. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಅಪಘಾತವಾಗುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛೀದ್ರ ಛಿದ್ರವಾಗಿದ್ದು, ಮೃತದೇಹಗಳು ಛಿದ್ರಗೊಂಡ ಹಿನ್ನೆಲೆ ಮೃತರ ಗುರುತುಗಳು ಪತ್ತೆಯಾಗುತ್ತಿಲ್ಲ ಎನ್ನಲಾಗಿದೆ.