ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 2023-24ರ ಋತುವಿನ (ಅಕ್ಟೋಬರ್ 1, 2023 ರಿಂದ ಸೆಪ್ಟೆಂಬರ್ 30, 2024 ರವರೆಗೆ) ಟೀಂ ಇಂಡಿಯಾದ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಪ್ರಕಟ ಮಾಡಿದೆ.
ಪ್ರಸಕ್ತ ವರ್ಷದಿಂದಲೇ ಟಿ20 ವಿಶ್ವಕಪ್ (T20 World Cup) ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ಸಾಮರ್ಥ್ಯ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ಮಣೆ ಹಾಕಿದೆ. ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ಜಿತೇಶ್ ಶರ್ಮಾ, ಮುಕೇಶ್ ಕುಮಾರ್ ಅವರನ್ನು ಸಿ-ವರ್ಗಕ್ಕೆ ಸೇರಿಸಲಾಗಿದೆ. ಇದರೊಂದಿಗೆ ಕಳೆದ ವರ್ಷ ಏಷ್ಯಾಕಪ್, ಏಕದಿನ ವಿಶ್ವಕಪ್ ಟೂರ್ನಿ ಆಯ್ಕೆಯಿಂದ ವಂಚಿರಾದ ಸಂಜು ಸ್ಯಾಮ್ಸನ್ ಅವರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ.
ಗ್ರೇಡ್-A+ (4 ಕ್ರೀಡಾಪಟುಗಳು)
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.
ಗ್ರೇಡ್-A (6 ಕ್ರೀಡಾಪಟುಗಳು)
ಆರ್. ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.
ಗ್ರೇಡ್-B (5 ಕ್ರೀಡಾಪಟುಗಳು)
ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.
ಗ್ರೇಡ್-C (15 ಕ್ರೀಡಾಪಟುಗಳು)
ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಕೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್
ಆಟಗಾರರಿಗೆ ವಾರ್ಷಿಕ ಸಂಬಳ ಎಷ್ಟು?
ಗ್ರೇಡ್ A+: 7 ಕೋಟಿ ರೂ.
ಗ್ರೇಡ್ A: 5 ಕೋಟಿ ರೂ.
ಗ್ರೇಡ್ ಬಿ: 3 ಕೋಟಿ ರೂ.
ಗ್ರೇಡ್ ಸಿ: 1 ಕೋಟಿ ರೂ.
ಪ್ರತಿ ಪಂದ್ಯಕ್ಕೆ ನಿಗದಿಯಾಗಿರುವ ವೇತನ ಎಷ್ಟು?
ಟೆಸ್ಟ್ ಪಂದ್ಯ ಶುಲ್ಕ: ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆದಿದ್ದರೆ 15 ಲಕ್ಷ ರೂ., ಪಡೆಯದಿದ್ದರೇ 7.5 ಲಕ್ಷ ರೂ.
ಏಕದಿನ ಪಂದ್ಯದ ಶುಲ್ಕ: ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆದಿದ್ದರೆ 6 ಲಕ್ಷ ರೂ., ಪಡೆಯದಿದ್ದರೇ 3 ಲಕ್ಷ ರೂ.
T20I ಪಂದ್ಯ ಶುಲ್ಕ: ಪ್ಲೇಯಿಂಗ್-11ನಲ್ಲಿ ಸ್ಥಾನ ಪಡೆದಿದ್ದರೆ, 3 ಲಕ್ಷ ರೂ., ಪಡೆಯದಿದ್ದರೇ 1.5 ಲಕ್ಷ ರೂ.