ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದರೊಂದಿಗೆ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಆರೋಗ್ಯದ ಬಗ್ಗೆಯೂ ಬಿಸಿಸಿಐ (BCCI) ಅಪ್ಡೇಟ್ ಬಿಡುಗಡೆ ಮಾಡಿದೆ.
ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮತ್ತೊಂದು ಆಘಾತ: ಈ ಬಾರಿ IPL ಆಡೋದು ಡೌಟ್?
ಶಮಿ ಫೆ.26 ರಂದು ಲಂಡನ್ನಲ್ಲಿ ತಮ್ಮ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ 2024ರ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸುತ್ತಿದೆ. ಅವರ ಆರೋಗ್ಯ ಸುಧಾರಿಸಿದ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ
ಶಮಿ ಮುಂಬರುವ ಐಪಿಎಲ್ನಿಂದ ಹೊರಗುಳಿಯಲ್ಲಿದ್ದಾರೆ. ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ, ಲೀಗ್ನಿಂದ ಹೊರಬಿದ್ದಿರುವುದು ಗುಜರಾತ್ ಟೈಟಾನ್ಸ್ ತಂಡಕ್ಕೆ ಆಘಾತ ಉಂಟು ಮಾಡಿದೆ. 2022ರಲ್ಲಿ ಮೊಹಮ್ಮದ್ ಶಮಿಯನ್ನು 6.25 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ಖರೀದಿಸಿತ್ತು.