ಹಾಗಲಕಾಯಿ ದೇಹದ ಅನೇಕ ಕಾಯಿಲೆಗಳಿಗೆ ಪರಿಹಾರ ನೀಡುತ್ತದೆ. ಮಧುಮೇಹಿಗಳಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಲು ಹಾಗಲಕಾಯಿ ತುಂಬಾ ಸಹಕಾರಿ. ಮಧುಮೇಹಿಗಳು ಪ್ರತಿದಿನ ಹಾಗಲಕಾಯಿ ಸೇವಿಸಬಹುದು.
ಹಾಗಲಕಾಯಿಯಲ್ಲಿ ಹೆಚ್ಚು ನಾರಿನಂಶ ಇರುವ ಕಾರಣ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಹಾಗಲಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಹಾಗಲಕಾಯಿ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಹಾಗಲಕಾಯಿಯಲ್ಲಿ ವಿಟಮಿನ್ ಎ ಇದ್ದು, ಕಣ್ಣುಗಳ ಆರೋಗ್ಯಕ್ಕೆ ಸಹಕಾರಿಯಾಗಿದೆ.
ಹಾಗಲಕಾಯಿಯಲ್ಲಿರುವ ವಿಟಮಿನ್ ಸಿ ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದನ್ನು ವಯಸ್ಕರು ಮತ್ತು ಮಕ್ಕಳು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಲಕಾಯಿ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಅಧಿಕ ಕೊಲೆಸ್ಟ್ರಾಲ್ನಿಂದ ಬಳಲುತ್ತಿದ್ದರೆ ಹಾಗಲಕಾಯಿ ಜ್ಯೂಸ್ ಕುಡಿಯಬಹುದು. ಇದರಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ. ಅ
ಹಾಗಲಕಾಯಿ ರುಚಿಯಲ್ಲಿ ತುಂಬಾ ಕಹಿ ಆಗಿರುತ್ತದೆ. ಹಾಗಲಕಾಯಿ ಜ್ಯೂಸ್ ಕಹಿ ಕಡಿಮೆಯಾಗಲು ಜೇನುತುಪ್ಪದೊಂದಿಗೆ ಬೆರೆಸಿ ಕುಡಿಯಬಹುದು. ಹಾಗಲಕಾಯಿ ಜ್ಯೂಸ್ ಅನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಹೆಚ್ಚು ಪರಿಣಾಮಕಾರಿಯಾಗಿದೆ.