ನಟಿ ಸಮಂತಾ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ. ತಮ್ಮ ನಟನೆ ಹಾಗೂ ಸೌಂದರ್ಯದಿಂದ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿರುವ ಚೆಲುವೆ ಸದ್ಯ ನಟನೆಯಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದಾರೆ.
ಆರೋಗ್ಯದ ಸಮಸ್ಯೆಯ ಕಾರಣದಿಂದಾಗಿ ನಟನೆಯಿಂದ ಬ್ರೇಕ್ ಪಡೆದುಕೊಂಡಿರುವ ನಟಿ ಯೋಗ, ಧ್ಯಾನದತ್ತ ಮುಖ ಮಾಡಿದ್ದಾರೆ.
ಸಿನಿಮಾಗಳಿಂದ ದೂರವಿದ್ದರು ಸಾಮಾಜಿಕ ಜಾಲಾ ತಾಣದ ಮೂಲಕ ನಟಿ ಅಭಿಮಾನಿಗಳಿಗೆ ಹತ್ತಿರುವಾಗಿದ್ದಾರೆ. ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತ ಮಾಹಿತಿ ಹಂಚಿಕೊಳ್ಳುವ ಸಮಂತಾ ಇದೀಗ ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸಮಂತಾ ವೈಟ್ ಶರ್ಟ್, ಡೆನಿಮ್ ಪ್ಯಾಟ್ ತೊಟ್ಟು ಆಕರ್ಷಕವಾಗಿ ಪೋಸ್ ಕೊಟ್ಟಿದ್ದಾರೆ. ಸಮಂತಾ ನಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಕೆಲ ಕಾಲ ಸಿನಿಮಾ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿಯರಲ್ಲಿ ಸಮಂತಾ ಒಬ್ಬರಾಗಿದ್ದು, ಲಕ್ಷಾಂತರ ಫಾಲೋವರ್ಸ್ ಹೊಂದಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ನಟಿ ಫಿಟ್ ನೆಸ್ ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.