ಬೆಂಗಳೂರು: 5,8,9 ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ ಕೊಟ್ಟ ವಿಚಾರವಾಗಿ ಇಂದಿನ ತನಕೂ ಸಂಘರ್ಷಗಳೇ ನಡೆಯುತ್ತಿದ್ದರೂ ಅದರ ಮಧ್ಯೆ ಇಂದಿನಿಂದ ಬೋರ್ಡ್ ಎಕ್ಸಾಂ ಶುರುವಾಗಿದ್ದು ಸರ್ಕಾರ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗೆ ಆಯಾ ಶಾಲೆಗಳಲ್ಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರದಿಂದ ಡಾ ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತ !
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸೇರಿ ಒಟ್ಟು 69,137 ಶಾಲೆಗಳಿಂದ 28.14 ಲಕ್ಷ ವಿದ್ಯಾರ್ಥಿಗಳಿಗೆ ಮಾ.18ರವರೆಗೆ ಮೌಲ್ಯಾಂಕನ ಪರೀಕ್ಷೆಗಳು ನಡೆಯಲಿವೆ.
Blue Aadhar Card: ನಿಮ್ಮ ಮನೆಯಲ್ಲಿ ಮಕ್ಕಳು ಇದ್ರೆ ಈ ವಿಚಾರ ನಿಮಗೆ ತಿಳಿದಿರಲಿ!
5ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ಮಾ.11ರಿಂದ 14ರ ವರೆಗೆ, 8, 9ನೇ ತರಗತಿಗೆ ಮಾ.11- 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಎಲ್ಲ ಮಕ್ಕಳಿಗೂ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು ಕ್ರಮವಾಗಿ 4.30ರವರೆಗೆ, ಸಂಜೆ 5, 5.15ಕ್ಕೆ ಮುಕ್ತಾಯ ವಾಗಲಿವೆ. 5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ 4 ವಿಷಯಗಳು, 8 ಮತ್ತು 9ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿವೆ.