ಕೋಲಾರ: ಚಿಕ್ಕ ತಿರುಪತಿಯ ಶ್ರೀ ಪ್ರಸನ್ನ ವೆಂಕಟ ರಮಣ ಸ್ವಾಮಿ ದೇವಾಲಯವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲ್ಯಾನ್ ಮಾಡುವಂತೆ ಸೂಚನೆ ನೀಡಿದ್ದು, ಆದಷ್ಟು ಬೇಗನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಹೇಳಿದರು.
ದೇವಾಲಯದ ಮುಂಭಾಗದಲ್ಲಿ 108 ಅಡಿಗಳ ರಾಜ ಗೋಪುರ ಕಾಮಗಾರಿ ಪೂರ್ಣಗೊಂಡಿದೆ. ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದರು. ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವುದರಿಂದ 5 ವರ್ಷಗಳಲ್ಲಿ ದೇವಾಲಯದ ಅಭಿವೃದ್ಧಿಗೆ ಬೇಕಾಗಿರುವ ಮೂಲ ಸೌಕರ್ಯಗಳ ಬಗ್ಗೆ ಪಟ್ಟಿ ಮಾಡಬೇಕು.
Diabetes: ಸಕ್ಕರೆ ಕಾಯಿಲೆ ಇರೋರು ಬಾದಾಮಿ, ವಾಲ್’ನಟ್, ಪಿಸ್ತಾ ತಿನ್ನುವ ಮೊದಲು ಈ ಮಾಹಿತಿ ತಿಳಿದುಕೊಳ್ಳಿ
ದೇವಾಲಯಕ್ಕೆ ಸೇರಿದ ಜಾಗಕ್ಕೆ ಸಂಬಂಧಿಸಿದಂತೆ ದಾವೆ ನಡೆಯುತ್ತಿದ್ದು, ನ್ಯಾಯಾಲಯದಲ್ಲಿ ನಮ್ಮ ಕಡೆ ಆಗಿದೆ. ದೇವಾಲಯದ ಅಭಿವೃದ್ಧಿಗೆ ಸಾಕಷ್ಟು ಮಂದಿ ದಾನಿಗಳು ಮುಂದಾಗಿದ್ದು, ಅವರ ಸಲಹೆ ಸೂಚನೆಗಳನ್ನು ಪಡೆಯಲಾಗುವುದು. ದೇವಾಲಯಕ್ಕೆ ಪ್ರಾಧಿಕಾರ ಮಾಡುವ ಉದ್ದೇಶ ಇಲ್ಲ. ಆದರೆ ಅಭಿವೃದ್ಧಿಯಾಗಬೇಕು. ಸ್ವಚ್ಛತೆ, ಶೌಚಾಲಯ ವ್ಯವಸ್ಥೆ, ಮೂಲಸೌಕರ್ಯಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಿ ಭಕ್ತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.