ರಾಮನಗರ:- ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆ ಪತ್ತೆ ಆಗಿದ್ದು, ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಿರುವ ಆರೋಪ ಬಲರಾಮ್ ಮೇಲೆ ಕೇಳಿ ಬಂದಿದೆ.
ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸದ್ಯ ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಮಹಾ ಶಿವರಾತ್ರಿಯ ಅಮಾವಸ್ಯೆ ಮುಗಿದಿದೆ. ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿ ಬಲರಾಮ್ನನ್ನು ವಶಕ್ಕೆ ಪಡೆದಿದ್ದಾರೆ. ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ.