ಕೊಡಗು: ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಪಂಚಾಯಿತಿಯ ಕಡಮಕಲ್ಲು ಪ್ರದೇಶಕ್ಕೆ ಶಾಸಕ ಡಾ.ಮಂತರ್ಗೌಡ ಭೇಟಿ ನೀಡಿ ಕಾರ್ಯಕರ್ತರು ಪಕ್ಷದ ಮುಖಂಡರು ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು.
ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದೆಂದು ಶಾಸಕರು ಅಭಯ ನೀಡಿದರು.ಕುಡಿಯುವ ನೀರು, ರಸ್ತೆ-ವಿದ್ಯುತ್ ಸಮಸ್ಯೆ, ಚರಂಡಿ ಸಮಸ್ಯೆ,ನೆಟ್ವರ್ಕ್ ಸಮಸ್ಯೆಗಳ ಬಗ್ಗೆ ಈ ಸಂದರ್ಭದಲ್ಲಿ ಸ್ಥಳೀಯರು ಶಾಸಕರ ಗಮನ ಸೆಳೆದರು.
Bigg News : ಲೋಕಸಭಾ ಚುನಾವಣೆ : ಮಾರ್ಚ್ 15ರಿಂದ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ
ಸ್ಥಳೀಯರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು. ನಂತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಶಾಸಕರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಬೇಕೆಂದು ಕರೆ ನೀಡಿ, ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ಸರಕಾರದ ಜನಪ್ರಿಯ ಪಂಚ ಗ್ಯಾರಂಟಿ ಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ನಾಯಕರು ಶ್ರಮಿಸಬೇಕೆಂದು ಕರೆ ನೀಡಿದರು.
ಮುಂದಿನ ಲೋಕಸಭಾ ಚುನಾವಣೆ ಬಹಳ ಪ್ರಮುಖವಾಗಿದ್ದು ಈ ನಿಟ್ಟಿನಲ್ಲಿ ಸರ್ವರೂ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.ಈ ಸಭೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎ ಹಂಸ, ಕಾಂಗ್ರೆಸ್ ಮುಖಂಡರುಗಳಾದ ಟಿ ಪಿ ರಮೇಶ್, ಮುನೀರ್ ಅಹ್ಮದ್, ಜಾನ್ಸನ್ ಪಿಂಟೋ, ಸೂರಜ್ ಹೊಸೂರು, ವಿ ಜಿ ಮೋಹನ್, ಹರಿಪ್ರಸಾದ್ ಕೋಚನ, ಪುಷ್ಪ ಪೂಣಚ್ಚ, ಶರತ್ ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ಥಳೀಯರು ಉಪಸ್ಥಿತರಿದ್ದರು.