ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ವಿಚಾರ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷ ನನ್ನ ಕೈಬಿಡಲ್ಲ ಎಂಬ ಅಚಲ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿಕೆ ಅಂತಿಮವಾಗಿ ಯಡಿಯೂರಪ್ಪ, ಹೈಕಮಾಂಡ್ ತೀರ್ಮಾನಿಸುತ್ತಾರೆ
Bigg News : ಲೋಕಸಭಾ ಚುನಾವಣೆ : ಮಾರ್ಚ್ 15ರಿಂದ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ
ನಾನು ಮೊದಲ ಬಾರಿ ಸ್ಪರ್ಧಿಸಿದಾಗ ಮೋದಿ ಹೆಸರಿನಲ್ಲಿ ಗೆದ್ದಿದ್ದೆ ಎರಡನೇ ಬಾರಿಯೂ ಪ್ರಧಾನಿ ಮೋದಿ ಹೆಸರಿನಲ್ಲೇ ಗೆದ್ದಿದ್ದೆ 3ನೇ ಬಾರಿಯೂ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ
ಪಕ್ಷದ ವಿಶ್ವಾಸ ನನ್ನ ಮೇಲಿದೆ, ನನಗೆ ಮತ್ತೆ ಅವಕಾಶ ಸಿಗುತ್ತದೆ ನನ್ನ ಬಗ್ಗೆ ಮೋದಿಗೆ ಗೊತ್ತಿದೆ, ಅವರು ಅಶೀರ್ವಾದ ಮಾಡುತ್ತಾರೆ
ಸೋಲುವ ಕಾಂಗ್ರೆಸ್ ಪಕ್ಷದಲ್ಲೇ ಟಿಕೆಟ್ಗಾಗಿ ಹೊಡೆದಾಟವಿದೆ ಬಿಜೆಪಿಯಲ್ಲಿ ಗೆಲುವಿನ ಹೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಏರಲು ಎಲ್ಲರೂ ಪ್ರಯತ್ನ ಮಾಡುತ್ತಾ ಇರ್ತಾರೆ? ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ ಎಂದರು.